ಯುವತಿಗೆ ರಿವಾಲ್ವರ್‌ನಿಂದ ಬೆದರಿಸಿ ಮೂವರಿಂದ ಗ್ಯಾಂಗ್‌ರೇಪ್

ಭಾನುವಾರ, 3 ಡಿಸೆಂಬರ್ 2017 (16:25 IST)
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಒಂದು ವಾರದ ನಂತರ, ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ ನಂತರ ಆಕೆಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಅಗ್ರಸ್ಥಾನ ಪಡೆದಿರುವ ಉತ್ತರಪ್ರದೇಶದ, ಹಮೀರ್ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, 18 ವರ್ಷದ ಯುವಕನನ್ನು ಬಂಧಿಸಲಾಗಿದ್ದು ಇನ್ನಿಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
 
ನೆರೆಮನೆಯ ಯುವಕ ಕರೆದಿರುವುದು ಕಂಡು ಮನೆಯಿಂದ ಹೊರಬಂದ ಯುವತಿಗೆ ಆತ ರಿವಾಲ್ವರ್‌ನಿಂದ ಬೆದರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆರೋಪಿ ಯುವಕ ತನ್ನ ಮತ್ತಿಬ್ಬರು ಸ್ನೇಹಿತರೊಂದಿಗೆ ಸೇರಿ ರೇಪ್ ಎಸಗಿದ್ದಾರೆ. ಅತ್ಯಾಚಾರದ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ವಿಡಿಯೋ ಬಹಿರಂಗಗೊಳಿಸುವುದಾಗಿ ಎಚ್ಚರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಉಳಿದ ಇಬ್ಬರು ಆರೋಪಿಗಳನ್ನು ಬಂಧಿಸಲು ಮೂರು ಪೋಲೀಸ್ ತಂಡಗಳು ಕೆಲಸ ಮಾಡುತ್ತಿವೆ. ನೆರೆಮನೆಯ ಆರೋಪಿ ಅತ್ಯಾಚಾರವೆಸಗಿರುವುದು ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ. 
 
ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿರುವ ಉತ್ತರ ಪ್ರದೇಶವು 2016 ರಲ್ಲಿ ಅಂತಹ ಘಟನೆಗಳಲ್ಲಿ 9.5% ರಷ್ಟು ಅಪರಾಧ ಪ್ರಮಾಣವನ್ನು ಹೊಂದಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದೆ.
 
ರಾಜ್ಯದಲ್ಲಿ 4,816 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯಪ್ರದೇಶದಲ್ಲಿ 2016 ರಲ್ಲಿ 4,882 ಪ್ರಕರಣಗಳು ದಾಖಲಾಗಿದ್ದು ಮೊದಲನೇ ಸ್ಥಾನ ಪಡೆದಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ