ಕೊರೊನಾ ಸೋಂಕಿಗೆ ಒಳಗಾದ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್
ಮಂಗಳವಾರ, 20 ಏಪ್ರಿಲ್ 2021 (08:25 IST)
ಹೈದರಾಬಾದ್ : ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸಿಎಂ ಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಸೋಮವಾರ ಸಂಜೆ ಅಧಿಕೃತವಾಗಿ ಮಾಹಿತಿ ನೀಡಲಾಗಿದೆ.
ಸಿಎಂ ಅವರನ್ನು ಅವರ ತೋಟದ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದ್ದು, ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಹಾಗೂ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಸಿಎಂ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.