ಉಗ್ರರ ಪ್ರವೇಶ: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

ಬುಧವಾರ, 21 ಜೂನ್ 2017 (17:01 IST)
ದೇಶದ ರಾಜಧಾನಿ ನವದೆಹಲಿಯಲ್ಲಿ 6 ರಿಂದ 7 ಉಗ್ರರು ಪ್ರವೇಶಿಸಿದ್ದಾರೆ ಎನ್ನುವ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ನಗರಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
 
ರಾಜಧಾನಿಯಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ನುಸುಳಿದ್ದಾರೆ ಎನ್ನುವ ಮಾಹಿತಿಗಳಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ಪಾಕಿಸ್ತಾನ ಮೂಲದ ಉಗ್ರರು ಜಮ್ಮು ಕಾಶ್ಮಿರ ಗಡಿ ಮಾರ್ಗವಾಗಿ ದೇಶದೊಳಗೆ ಪ್ರವೇಶಿಸಿದ್ದು ರಂಜಾನ್ ಹಬ್ಬದ ಸಂದರ್ಭದಲ್ಲಿ ದಾಳಿ ನಡೆಸುವ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ.
 
ಕೋಮುಸೌಹಾರ್ದತೆಯನ್ನು ಹದಗೆಡಿಸಲು ದೇಶದ ಇತರ ಭಾಗಗಳಲ್ಲೂ ದಾಳಿ ನಡೆಸುವ ಬಗ್ಗೆ ಲಷ್ಕರ್ ಸೇರಿದಂತೆ ಇತರ ಉಗ್ರಗಾಮಿ ಸಂಘಟನೆಗಳು ಮುಂದಾಗಿವೆ ಎಂದು ಗುಪ್ತಚರ ಅಧಿಕಾರಿಗಳು ತಿಳಿಸಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ