ನವದೆಹಲಿ : ಭಾರತದಲ್ಲಿ ಎಲೆಕ್ಟ್ರಿಕ್ ಕಾರು ಘಟಕ ನಿರ್ಮಾಣ ಸಂಬಂಧ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ ಕಂಪನಿ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದೆ.
ವಾರ್ಷಿಕ 5 ಲಕ್ಷ ಎಲೆಕ್ಟ್ರಿಕ್ ವಾಹನ ತಯಾರಿಸುವ ಸಾಮರ್ಥ್ಯದ ಘಟಕ ಸ್ಥಾಪನೆ ಸಂಬಂಧ ಹೂಡಿಕೆಯ ಪ್ರಸ್ತಾಪಕ್ಕಾಗಿ ಟೆಸ್ಲಾ ಭಾರತ ಸರ್ಕಾರದೊಂದಿಗೆ ಚರ್ಚೆಯನ್ನು ಪ್ರಾರಂಭಿಸಿದೆ ಎಂದು ಸರ್ಕಾರಿ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
ಭಾರತದಲ್ಲಿ ತಯಾರಾಗುವ ಎಲೆಕ್ಟ್ರಿಕ್ ಕಾರಿನ ಬೆಲೆ 20 ಲಕ್ಷ ರೂ. ನಿಂದ ಆರಂಭವಾಗುವ ಸಾಧ್ಯತೆಯಿದೆ. ಇಂಡೋ-ಪೆಸಿಫಿಕ್ ಪ್ರದೇಶದ ದೇಶಗಳಿಗೆ ಭಾರತದಿಂದ ಕಾರುಗಳನ್ನು ರಫ್ತು ಮಾಡಲು ಟೆಸ್ಲಾ ಮುಂದಾಗಿದೆ ಎಂದು ವರದಿಯಾಗಿದೆ.