ಖಾಸಗಿ ಕಂಪೆನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತ್ಯಾಚಾರಕ್ಕೊಳಗಾದ ಯುವತಿ ಎರಡು ವರ್ಷಗಳ ಹಿಂದೆ ಏರಿಂಡಿಯಾ ಉದ್ಯೋಗಿ ಅವರನ್ನು ಭೇಟಿಯಾಗಿದ್ದರು. ನಂತರ ಸ್ನೇಹ ಪ್ರೀತಿಯಾಗಿ ಪರಿವರ್ತನೆಯಾಗಿತ್ತು. ವಿವಾಹದ ನೆಪದಲ್ಲಿ ನಿರಂತರ ರೇಪ್ ಎಸಗಿದ ಆರೋಪಿ ಅರೆಸ್ಟ್ ಆಗಿದ್ದಾನೆ.
ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಏರಿಂಡಿಯಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಆರೋಪಿ, ಮದುವೆ ನೆಪದಲ್ಲಿ ದೆಹಲಿಯ ಬೊರಿವಲಿಯಲ್ಲಿರುವ ತನ್ನ ನಿವಾಸದಲ್ಲಿ ನಿರಂತರವಾಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿಯ ಮಂದಿರವೊಂದರಲ್ಲಿ ವಿವಾಹ ಕೂಡಾ ನೇರವೇರಿತ್ತು. ತಾನು ಗರ್ಭವತಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ರಾಜ್ ಪಟೇಲ್ ಒತ್ತಾಯಿಸತೊಡಗಿದ್ದ. ಇಲ್ಲವಾದಲ್ಲಿ ಮದುವೆಯಾಗುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಆರೋಪಿ ರಾಜ್ ಪಟೇಲ್‌ನನ್ನು ಬಂಧಿಸಿ ಆತನ ವಿರುದ್ಧ ಅತ್ಯಾಚಾರ, ಅನೈಸರ್ಗಿಕ ಸೆಕ್ಸ್, ವಂಚನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.