ಮಹಾದಾಯಿ ವಿವಾದ ಇತ್ಯರ್ಥಕ್ಕೆ ಮಾತುಕತೆಗೆ ಒಪ್ಪಿ ಬರೆದಿರುವ ಪತ್ರದ ಬಗ್ಗೆ ಗೋವಾ ಬಿಜೆಪಿ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಇತ್ತ ರೈತರು ತಮ್ಮ ಹೋರಾಟ ತೀವ್ರಗೊಳಿಸಿದ್ದಾರೆ. ಗೋವಾ ಬಿಜೆಪಿಯ ಇಬ್ಬಗೆ ನೀತಿಯಿಂದ ಕರ್ನಾಟಕದಲ್ಲಿ ಬಿಜೆಪಿ ಇಮೇಜ್‍ಗೆ ಧಕ್ಕೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.