ಜಾಹೀರಾತುಗಳ ನಿಷೇಧ ಕೋರಿದ ಅರ್ಜಿಗೆ ಬಾಂಬೆ ಹೈಕೋರ್ಟ್ ತರಾಟೆ
ಗುರುವಾರ, 29 ಸೆಪ್ಟಂಬರ್ 2022 (12:34 IST)
ಮುಂಬೈ : ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಮಾಂಸ ಮತ್ತು ಮಾಂಸದ ಉತ್ಪನ್ನಗಳ ಜಾಹೀರಾತುಗಳ ಮೇಲೆ ನಿರ್ಬಂಧ ಕೋರಿ ಜೈನ ಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಅರ್ಜಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ಮತ್ತು ನ್ಯಾಯಮೂರ್ತಿ ಮಾಧವ್ ಜಾಮ್ದಾರ್ ಅವರ ಪೀಠವು ಈ ವಿಷಯವು ಶಾಸಕಾಂಗದ ವ್ಯಾಪ್ತಿಗೆ ಬರುತ್ತದೆ.
ನಾವು ನಿಷೇಧವನ್ನು ವಿಧಿಸುವ ಕಾನೂನು/ನಿಯಮಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ವಿಚಾರಣೆ ವೇಳೆ ಅರ್ಜಿದಾರರನ್ನು ಟೀಕಿಸಿದ ಪೀಠ, ಮೊದಲು ಇದು ನಮ್ಮ ಅಧಿಕಾರ ವ್ಯಾಪ್ತಿಯಲ್ಲಿದೆಯೇ ಎಂದು ನಮಗೆ ತಿಳಿಸಿ.
ಯಾವುದನ್ನಾದರೂ ನಿಷೇಧಿಸಲು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸಲು ನೀವು ಹೈಕೋರ್ಟ್ಗೆ ಕೇಳುತ್ತಿದ್ದೀರಿ, ಅದನ್ನು ಶಾಸಕಾಂಗ ನಿರ್ಧರಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡಿತು.