ಯುವಕನನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿ ಹಣದ ಬೇಡಿಕೆಯಿಟ್ಟ ದುಷ್ಕರ್ಮಿಗಳು

ಭಾನುವಾರ, 11 ನವೆಂಬರ್ 2018 (13:48 IST)
ಹರಿಯಾಣ : ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿ, ಅದನ್ನು ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಘಟನೆ ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ನೇಹಿತರನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದ ಯುವಕನೊಬ್ಬನನ್ನು ಅಪಹರಿಸಿ ನಂತರ ಆತನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅದನ್ನು  ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

 

ಅಷ್ಟೇ ಅಲ್ಲದೇ ಯುವಕನ ಮನೆಗೆ ಫೋನ್ಮಾಡಿ 50 ಸಾವಿರ ನೀಡಿದರೆ ಮಗನನ್ನು ಬಿಡುವುದಾಗಿ ಹೇಳಿ, ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
 

ಇದರಿಂದ ಗಾಬರಿಗೊಂಡ ಯುವಕನ ಮನೆಯವರು 10 ಸಾವಿರ ಹಣವನ್ನು ನೀಡಿ ಮಗನನ್ನು ಮನೆಗೆ ಕರೆ ತಂದ ಬಳಿಕ ನುಹ್ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ