ಆಳವಾದ ಕಂದಕಕ್ಕೆ ಉರುಳಿದ ಬಸ್! 10 ಮಂದಿ ದುರ್ಮರಣ

ಗುರುವಾರ, 15 ಸೆಪ್ಟಂಬರ್ 2022 (06:50 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ.

ಬಸ್ ಗಾಲಿ ಮೈದಾನದಿಂದ ಪೂಂಚ್ಗೆ ತೆರಳುತ್ತಿದ್ದಾಗ ಬೆಳಗ್ಗೆ 8.30ರ ಸುಮಾರಿಗೆ ಸಾವ್ಜಿಯಾನ್ನ ಗಡಿ ಬೆಲ್ಟ್ನ ಬ್ರಾರಿ ನಲ್ಲಾಹ್ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂಬತ್ತು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 28 ಮಂದಿಯಲ್ಲಿ ಒಂಬತ್ತು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮಿನಿಬಸ್ ಅಪಘಾತದ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ