ರಾತ್ರೋರಾತ್ರಿ 7 ಕೋಟಿ ಒಡೆಯನಾದ ಪಾಕಿಸ್ತಾನ ಮೀನುಗಾರ
ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನುಗಳನ್ನು ಮಾರಾಟ ಮಾಡಿ ಪಾಕಿಸ್ತಾನದ ಮೀನುಗಾರನೊಬ್ಬ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ.ಬಡ ಇಬ್ರಾಹಿಂ ಹೈದರಿ ಮೀನುಗಾರಿಕಾ ಗ್ರಾಮದಲ್ಲಿ ವಾಸಿಸುವ ಹಾಜಿ ಬಲೋಚ್ ಮತ್ತು ಆತನ ಸಂಗಡಿಗರು ಅರಬ್ಬಿ ಸಮುದ್ರದಿಂದ ಅಪರೂಪವಾದ ಗೋಲ್ಡನ್ ಫಿಶ್ ಅಥವಾ “ಸೋವಾ” ಎಂದು ಕರೆಯಲ್ಪಡುವ ಮೀನುಗಳನ್ನು ಹಿಡಿದು ಮಾರಿ 7 ಕೋಟಿ ಹಣವನ್ನು ಸಂಪಾದಿಸಿದ್ದಾರೆ.