ಕಾವೇರಿ ನದಿ ನೀರು ವಿವಾದದಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ

ಬುಧವಾರ, 20 ಸೆಪ್ಟಂಬರ್ 2017 (13:59 IST)
ಕಾವೇರಿ ನದಿ ನೀರು ವಿವಾದದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಬಗ್ಗೆ ಸುಪ್ರೀಂಕೋರ್ಟ್ ಒಲವು ತೋರಿದೆ. ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ನಮ್ಮ ಅಭಿಪ್ರಾಯ ಎಂದು ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂಕೋರ್ಟ್`ನ ತ್ರಿಸದಸ್ಯ ಪೀಠ ಹೇಳಿದೆ.

ಕಾವೇರಿ ನಿರ್ವಹಣಾ ಮಂಡಳಿ ಬೇಡವೆಂದು ಕರ್ನಾಟಕ ವಿರೋಧಿಸುತ್ತಾ ಬಂದಿದೆ. ಸುಪ್ರೀಂಕೋರ್ಟ್ ಪೀಠದ ಈ ಅಭಿಪ್ರಾಯ ಆತಂಕಕ್ಕೆ ಎಡೆ ಮಾಡಿದೆ. ಕೃಷ್ಣಾ, ರ್ಮಾದ ನದಿ ವಿವಾದಗಳಲ್ಲೂ ನಿರ್ವಹಣಾ ಮಂಡಳಿ ರಚನೆಯಾಗಿದೆ. ಕಾವೇರಿ ನದಿ ನೀರಿಗೂ ನಿರ್ವಹಣಾ ಮಂಡಳಿ ರಚನೆಯಾಗಬೇಕೆಂದು ತ್ರಿಸದಸ್ಯ ಪೀಠ ಅಭಿಪ್ರಾಯ ಪಟ್ಟಿದ್ದು, ತೀರ್ಪಿನಲ್ಲಿ ಮಂಡಳಿಯ ಸ್ವರೂಪ ಹೇಗಿರಬೇಕೆಂಬ ಬಗ್ಗೆ ತಿಳಿಸುವುದಾಗಿ ಹೇಳಿದೆ.

ಈ ಮಧ್ಯೆ, ಸುಪ್ರೀಂಕೋರ್ಟ್ ಅಭಿಪ್ರಾಯಕ್ಕೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಅಧಿಕಾರ ಸುಪ್ರೀಂಕೋರ್ಟ್`ಗೆ ಇಲ್ಲ. ಮಂಡಳಿ ರಚಿಸುವ ಸರ್ವೋಚ್ಛ ಅಧಿಕಾರವಿದು ಸಂಸತ್ತಿಗೆ ಎಂದು ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಮವಾದ ಮಂಡಿಸಿದ್ಧಾರೆ.  ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ನೀರಿನ ಸಂಪೂರ್ಣ ಅಧಿಕಾರ  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ