ಆರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ
ಸೋಮವಾರ, 5 ಆಗಸ್ಟ್ 2019 (11:36 IST)
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರ್ಟಿಕಲ್ 370, 35 ಎ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಅದರ ಪ್ರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇಲ್ಲ ಎಂದ ಕೇಂದ್ರ ಸರ್ಕಾರ, ಅರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಘೋಷಿಸಿದೆ.
ಈ ಬಗ್ಗೆ ರಾಜ್ಯ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾಪ ಮಂಡನೆ ಮಾಡಿದ್ದು, ಸಂವಿಧಾನ ಕಾಲಕ್ಕೆ ತಕ್ಕಂತೆ ಬದಲಾವಣೆ ತರಲಾಗ್ತಿದೆ. ಆ ಮೂಲಕ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.