ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಶುಲ್ಕ- ಕ್ರಮಕ್ಕೆ ಕೇಂದ್ರ ಸರ್ಕಾರ ಸೂಚನೆ

ಶುಕ್ರವಾರ, 24 ನವೆಂಬರ್ 2017 (08:16 IST)
ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸದಂತೆ ಹಾಗೂ ಚಿಕಿತ್ಸೆ ಪಾರದರ್ಶಕವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಕೇಂದ್ರದ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದಾನ ಅವರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ರಾಜ್ಯದ ಎಲ್ಲ ಪ್ರಮುಖ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆ ನಡೆಸಿ, ರೋಗಿಗಳಿಗೆ ನ್ಯಾಯಯುತವಾದ ಶುಲ್ಕ ವಿಧಿಸುವಂತೆ ನಿರ್ದೇಶನ ಮಾಡಬೇಕು. ತಪ್ಪಿದಲ್ಲಿ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದ್ದಾರೆ.

ಗುರುಗ್ರಾಮದ ಆಸ್ಪತ್ರೆಯಲ್ಲಿ ಡೆಂಗ್ಯೂದಿಂದ ಮೃತಪಟ್ಟ ಬಾಲಕಿಗೆ 16 ಲಕ್ಷ ಶುಲ್ಕ ವಿಧಿಸಿದ ಘಟನೆ ಈಚೆಗೆ ನಡೆದಿತ್ತು. ಇದರಿಂದ ಮಿತಿ ಮೀರಿದ ಶುಲ್ಕ ವಿಧಿಸಲಾಗುತ್ತಿದೆ ಎಂಬ ಆರೋಪಕ್ಕೆ ಪುಷ್ಟಿ ನೀಡಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ