ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ?

ಗುರುವಾರ, 18 ಆಗಸ್ಟ್ 2022 (15:02 IST)
ನವದೆಹಲಿ : ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
 
ದೆಹಲಿಯಲ್ಲಿರುವ ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ಫ್ಲಾಟ್ಗಳನ್ನು ನೀಡಲು ಯಾವುದೇ ನಿರ್ದೇಶನ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಅಷ್ಟೇ ಅಲ್ಲದೇ ಅಕ್ರಮ ವಿದೇಶಿಗರು ಅವರು ನೆಲೆಸಿರುವ ಸ್ಥಳದಲ್ಲಿಯೇ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಸೂಚಿಸಿದೆ.

ದೆಹಲಿಯ ಬಕ್ಕರ್ವಾಲಾ ಪ್ರದೇಶದಲ್ಲಿ ರೋಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್ ನೀಡಲು ಮುಂದಾಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿ ತಿಳಿಸಿದ್ದರು.

ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧವೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಸಮಸ್ಯೆ ಎಂದು ಹಿಂದೆ ಹೇಳಿದ್ದ ಕೇಂದ್ರ ಈಗ ಫ್ಲ್ಯಾಟ್ ನೀಡುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಜನ ಎತ್ತಿದ್ದರು.

ಚರ್ಚೆ ಜಾಸ್ತಿ ಆಗುತ್ತಿದ್ದಂತೆ ಕೇಂದ್ರ ಸರ್ಕಾರ ರೋಹಿಂಗ್ಯಾ ಮುಸ್ಲಿಮರಿಗೆ ಯಾವುದೇ ಫ್ಲ್ಯಾಟ್ ನೀಡುವುದಿಲ್ಲ ಎಂದು ಸ್ಪಷ್ಟನೆ ನೀಡಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ