ಭೋಪಾಲ್: ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಶಾಂತಿ ಸ್ಥಾಪಿಸುವ ಸಲುವಾಗಿ ಕೇಂದ್ರ ಸರ್ಕಾರ 1,100 ಘರ್ಷಣೆ ನಿಗ್ರಹ ಪಡೆಗಳನ್ನು ರವಾನಿಸಿದೆ.
ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದರಿಂದ ಮಧ್ಯಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ರಸ್ತೆಯಲ್ಲಿದ್ದ ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಶಾಂತಿ ಮರುಸ್ಥಾಪಿಸುವ ಸಲುವಾಗಿ ಕೇಂದ್ರ ಸರ್ಕಾರ 600 ಆಕ್ಷನ್ ಫೋರ್ಸ್, 1,100 ಘರ್ಷಣೆ ನಿಗ್ರಹ ವಿಶೇಷ ಪಡೆಗಳನ್ನು ರವಾನಿಸಿದೆ. ಈ ಮಧ್ಯೆ ರೈಅತರ ಪ್ರತಿಭಟನೆ ಹಿನ್ನಲೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.