ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಪಟ್ಟು; ಯಾರಾಗುತ್ತಾರೆ ಮುಂದಿನ ಅಧ್ಯಕ್ಷರು?
ಸೋಮವಾರ, 24 ಆಗಸ್ಟ್ 2020 (09:49 IST)
ನವದೆಹಲಿ : ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಅಧ್ಯಕ್ಷರನ್ನು ಬದಲಾವಣೆ ಮಾಡುವ ಒತ್ತಾಯ ಕೇಳಿಬಂದಿದ್ದು, ನಾಯಕತ್ವ ಬದಲಾಗಬೇಕೆಂದು ಹಿರಿಯ ನಾಯಕರು ಪಟ್ಟು ಹಿಡಿದಿದ್ದಾರೆ.
ಈ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿದ್ದು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅಧ್ಯಕ್ಷ ಸ್ಥಾನಕ್ಕೇರಲು ನಿರಾಕರಿಸಿದ ಹಿನ್ನಲೆಯಲ್ಲಿ ಈ ಬಾರಿ ಗಾಂಧಿ ಕುಟುಂಬೇತರ ವ್ಯಕ್ತಿಯು ಅಧ್ಯಕ್ಷ ಪಟ್ಟ ಸ್ವೀಕರಿಸುವ ಸಂಭವವಿದೆ ಎನ್ನಲಾಗಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುಶೀಲ್ ಕುಮಾರ್ ಸಿಂಧೆ, ಅಶೋಕ್ ಗೆಹ್ಲೋಟ್ ಮುಂತಾದವರ ಹೆಸರು ಕೇಳಿಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಇಂದು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ CWC ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪಕ್ಷದ ಹೊಸ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಮಾಡಲಾಗುವುದು ಎನ್ನಲಾಗಿದೆ.