ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದ ಮಲತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಸೋಮವಾರ, 4 ಮಾರ್ಚ್ 2019 (10:06 IST)
ವಡೋದರ : ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದ ಮಲತಂದೆಗೆ ಗುಜರಾತ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.


2013ರ ಡಿಸೆಂಬರ್ ನಲ್ಲಿ 45 ವರ್ಷದ ಮಲತಂದೆಯೊಬ್ಬ ತಾಯಿ ಕೆಲಸಕ್ಕಾಗಿ ಹೊರ ಹೋದ ವೇಳೆ 13 ಮತ್ತು 14 ವರ್ಷದ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಈ ಬಗ್ಗೆ ಸಂತ್ರಸ್ತ ಬಾಲಕಿಯರಿಬ್ಬರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ವಾದ-ವಿವಾದಗಳನ್ನು ಆಲಿಸಿ ಇದೀಗ ಅಪರಾಧಿಗೆ 20 ವರ್ಷದ ಜೈಲುವಾಸದ ಶಿಕ್ಷೆಯನ್ನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ