ಅಪರಾಧಿಗೆ 42 ವರ್ಷಗಳ ಬಳಿಕ ಶಿಕ್ಷೆ ಕೊಟ್ಟ ಕೋರ್ಟ್!

ಶನಿವಾರ, 3 ಜೂನ್ 2023 (14:39 IST)
ಲಕ್ನೋ : ಹತ್ತು ಜನ ದಲಿತರನ್ನು ಹತ್ಯೆ ಮಾಡಿದ್ದ ಉತ್ತರಪ್ರದೇಶದ ವ್ಯಕ್ತಿಯೊಬ್ಬನಿಗೆ 90ನೇ ವಯಸ್ಸಿನಲ್ಲಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
 
ಅಪರಾಧಿ ಗಂಗಾ ದಯಾಳ್ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಫಿರೋಜಾಬಾದ್ ಜಿಲ್ಲಾ ಕೋರ್ಟ್, ಜೊತೆಗೆ 55,000 ರೂ. ದಂಡವನ್ನು ಸಹ ವಿಧಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ 13 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಉಲ್ಲೇಖಿಸಿದೆ. 

42 ವರ್ಷಗಳ ಹಿಂದೆ ನಡೆದಿದ್ದ ಈ ಹತ್ಯೆ ಪ್ರಕರಣ ದೇಶಾದ್ಯಂತ ಆಘಾತವನ್ನುಂಟು ಮಾಡಿತ್ತು. 1981ರಲ್ಲಿ ಸದುಪುರ ಗ್ರಾಮದಲ್ಲಿ ಹಿಂಸಾಚಾರ ನಡೆದು 10 ಮಂದಿಯನ್ನು ನಿರ್ದಯವಾಗಿ ಕೊಲ್ಲಲಾಗಿತ್ತು. ಅಲ್ಲದೆ ಹಿಂಸಾಚಾರದಲ್ಲಿ ಇಬ್ಬರು ಗಾಯಗೊಂಡಿದ್ದರು.

ಗುರುತಿಸಲಾಗಿದ್ದ 10 ಆರೋಪಿಗಳಲ್ಲಿ 9 ಜನ ಆರೋಪಿಗಳು ವಿಚಾರಣೆ ಎದುರಿಸುತ್ತಿರುವಾಗಲೇ ಸಾವನ್ನಪ್ಪಿದ್ದರು. ಉಳಿದ ಏಕೈಕ ಅಪರಾಧಿ ಗಂಗಾ ದಯಾಳ್ ಈಗ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ