ಜೈಲಿಂದ್ದ ಹೊರಬಂದ ಮರುದಿನವೆ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಮುಂದಾದ ಕೇಜ್ರಿವಾಲ್

Sampriya

ಭಾನುವಾರ, 15 ಸೆಪ್ಟಂಬರ್ 2024 (13:23 IST)
Photo Courtesy X
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿ ಆರು ತಿಂಗಳ ಬಳಿಕ ಬಿಡುಗಡೆಯಾದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೇರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ, ಮತ್ತೆ ಜನಾಶೀರ್ವಾದ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.

ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಪಕ್ಷದ ಕಚೇರಿಗೆ ತೆರಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ನನಗೆ ಇದೀಗ ನ್ಯಾಯಾಲಯದಿಂದ ಸಿಕ್ಕಿದೆ. ಆದರೆ ನಾನು ಜನತಾ ನ್ಯಾಯಾಲಯದಿಂದ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ.  ಕೇಜ್ರೀವಾಲ್ ಪ್ರಾಮಾಣಿಕವಾಗಿದ್ದರೆ ಜನರು ಮತ್ತೆ ನಡೆಯಲಿರುವ ಚುನಾವಣೆಯಲ್ಲಿ ಆ್ಯಪ್‌ಗೆ ಮತ ಹಾಕಿ ಗೆಲ್ಲಿಸಲಿ, ಜನಾದೇಶದ ನಂತರವೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಅವರು ಹೇಳಿದರು.

ರಾಜೀನಾಮೆ ನೀಡಿದ ನಂತರ ಪಕ್ಷದ ಸದಸ್ಯರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ. ನಾನು ಜನರ ಬಳಿಗೆ ತೆರಳಿ ಅವರ ಬೆಂಬಲ ಕೋರುತ್ತೇನೆ ಎಂದು ಕೇಜ್ರಿವಾಲ್ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ