ಮುಂಬೈ : 17 ವರ್ಷದ ಹುಡುಗಿ ಮೇಲೆ ಸ್ವಂತ ತಂದೆ, ಚಿಕ್ಕಪ್ಪ ಮತ್ತು ಅಜ್ಜನೇ ಹಲವಾರು ಬಾರಿ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ.
ತಾನು ಪ್ರಸ್ತುತ ಓದುತ್ತಿರುವ ಪುಣೆಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳದ ಕುರಿತು ವಿಶಾಖಾ ಸಮಿತಿಯ ಸದಸ್ಯರ ಮುಂದೆ ಹುಡುಗಿ ಇತ್ತೀಚೆಗೆ ತನಗಾದ ಸಂಕಷ್ಟವನ್ನು ಹೇಳಿಕೊಂಡ ನಂತರ ಘಟನೆ ಬೆಳಕಿಗೆ ಬಂದಿದೆ.
ಇದೀಗ ನಗರದಲ್ಲಿದ್ದ ಸಂತ್ರಸ್ತೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಪುಣೆ ಪೊಲೀಸರು ಈ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿಭಾಗಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತ್ರ ಹುಡುಗಿ, 2016 ಮತ್ತು 2018 ರ ನಡುವೆ ಉತ್ತರ ಪ್ರದೇಶದಲ್ಲಿ ತನ್ನ ತವರು ಮನೆಯಲ್ಲಿದ್ದಾಗ, ತನ್ನ ಚಿಕ್ಕಪ್ಪನಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಅಜ್ಜ ಕಿರುಕುಳ ನೀಡಿದ್ದಾನೆ ಎಂದು ದೂರಿನ ಮೂಲಕ ಆರೋಪಿಸಿದ್ದಾಳೆ.