ಕೇರಳದಲ್ಲಿ ಕೊರೊನಾ ತಗ್ಗುತ್ತಿದ್ದಂತೆ ನಿರ್ಬಂಧ ಸಡಿಲಿಕೆ ಮಾಡಿದ ಸರ್ಕಾರ

ಬುಧವಾರ, 8 ಸೆಪ್ಟಂಬರ್ 2021 (11:11 IST)
ತಿರುವನಂತಪುರಂ, ಸೆ 8: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೆಲವು ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ. ಮಂಗಳವಾರ, ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ನಿರ್ಬಂಧಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಸಡಿಲಗೊಳಿಸಲು ಸೂಚಿಸಿದೆ.

ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಸೋಂಕಿನ ಪಾಸಿಟಿವಿಟಿ ದರವೂ ಇಳಿಕೆಯಾಗಿದೆ. ಹೀಗಾಗಿ ನಿರ್ಬಂಧಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಎಲ್ಲಾ ವಿದ್ಯಾರ್ಥಿಗಳು, ತರಬೇತುದಾರರು, ಶಿಕ್ಷಕರು ಹಾಗೂ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿರಬೇಕು ಎಂದು ಸೂಚನೆ ನೀಡಿದೆ. ರಾಜ್ಯದಲ್ಲಿ ಒಟ್ಟಾರೆ ಪಾಸಿಟಿವಿಟಿ ದರವನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ವಿಶ್ಲೇಷಣಾ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಟಿಪಿಆರ್ ದರವು ಆಗಸ್ಟ್ ಕೊನೆ ವಾರದಲ್ಲಿ 18.49% ಇದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ದರ 17.91%ಗೆ ಇಳಿದಿದೆ. ಜನರು ಕೊರೊನಾ ನಿಯಮಗಳನ್ನು ಸೂಕ್ತವಾಗಿ ಪಾಲನೆ ಮಾಡಿದರೆ, ಮುಂದಿನ ಕೆಲವೇ ದಿನಗಳಲ್ಲಿ ಸೋಂಕಿನ ಸಂಖ್ಯೆ ಮತ್ತಷ್ಟು ಇಳಿಮುಖವಾಗಲಿದೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ