ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

Sampriya

ಗುರುವಾರ, 4 ಏಪ್ರಿಲ್ 2024 (13:43 IST)
ನವದೆಹಲಿ: ಸಿಎಂ ಸ್ಥಾನದಿಂದ ಕೇಜ್ರಿವಾಲ್ ಅವರನ್ನು ವಜಾಗೊಳಿಸುವಂತೆ  ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ.

ಅಬಕಾರಿ ನೀತಿ ಸಂಬಂಧಿತ  ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಂತೆ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಅರ್ಜಿ ವಿಚಾರಣೆ ನಡೆಸಿದ   ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅರೋರಾ ಅವರಿದ್ದ ಪೀಠವು,  'ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿರಬೇಕು. ನ್ಯಾಯಾಲಯವಾಗಿ ನಾವು ಕಾನೂನಿನ ಚೌಕಟ್ಟಿನೊಳಗೆ ಹೋಗಬೇಕು. ನೀವು ಹೇಳಿದಂತೆ ಪರಿಹಾರ ನೀಡಲು ಸಾಧ್ಯವಿಲ್ಲ. ಹಾಗಾಗಿ ನೀವು ಕಾನೂನಿನ ಚೌಕಟ್ಟಿನೊಳಗೆ ಸೂಕ್ತವಾದ ಕಾನೂನು ಪ್ರಾಧಿಕಾರ ಅಥವಾ ವೇದಿಕೆಯ ಮುಂದೆ ಹೋಗಬೇಕು' ಎಂದು ಹೇಳಿದ್ದಾರೆ

ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದ್ದರಿಂದ, ಅರ್ಜಿದಾರ ವಿಷ್ಣು ಗುಪ್ತಾ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ ಮತ್ತು ಅವರು ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ