ಅಧಿವೇಶನದಲ್ಲಿ ಶಾ ಮಾತಿಗೆ ಸದನ ಸೈಲೆಂಟ್..!
ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಚರ್ಚೆ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಟಿಎಂಸಿ ಸಂಸದ ಸೌಗತಾ ರೇ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ಈ ದೇಶದಲ್ಲಿ ಎರಡು ಪ್ರಧಾನಿ, ಎರಡು ಸಂವಿಧಾನ ಹಾಗೂ ಎರಡು ಧ್ವಜ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. ಯಾರು ಇದನ್ನು ಮಾಡಿದ್ದಾರೋ, ಈ ಪ್ರಮಾದವನ್ನು ಪ್ರಧಾನಿ ನರೇಂದ್ರ ಮೋದಿ ಸರಿಪಡಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.