ಸುಪ್ರೀಂನಲ್ಲಿ ಯೋಗಿ ಸರ್ಕಾರದ ಸಮರ್ಥನೆ

ಗುರುವಾರ, 23 ಜೂನ್ 2022 (10:45 IST)
ನವದೆಹಲಿ : ಗಲಭೆಗೂ ಬುಲ್ಡೋಜರ್ ಕಾರ್ಯಾಚರಣೆಗೂ ಯಾವುದೇ ಸಂಬಂಧವಿಲ್ಲ.

ಕಾನೂನು ಬದ್ಧವಾಗಿಯೇ ಅಕ್ರಮ ಕಟ್ಟಡಗಳನ್ನು ಕೆಡವಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ಗೆ ತನ್ನ ಕಾರ್ಯಾಚರಣೆಯ ಬಗ್ಗೆ ಸಮರ್ಥನೆ ನೀಡಿದೆ.

ನೂಪುರ್ ಶರ್ಮಾ ಹೇಳಿಕೆಯನ್ನು ಖಂಡಿಸಿ ನಡೆದ ಗಲಭೆಯ ಬಳಿಕ ಉತ್ತರ ಪ್ರದೇಶದ ಹಲವೆಡೆ ಕಟ್ಟಡಗಳನ್ನು ಕೆಡವಲಾಗಿತ್ತು. ಒಂದೇ ಸಮುದಾಯದ ಕಟ್ಟಡಗಳನ್ನು ಗುರಿಯಾಗಿಸಿ ನಡೆದ ಕಾರ್ಯಾಚರಣೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿತ್ತು.

ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಜೂನ್ 16 ಎಂದು ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.

ಈ ಅರ್ಜಿಯ ವಿಚಾರಣೆ ವೇಳೆ, ಕಾನೂನು ಬದ್ಧವಾಗಿಯೇ ಈ ಕಾರ್ಯಾಚರಣೆ ಮಾಡಲಾಗಿದೆ. ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವುದು ಹೊಸದೆನಲ್ಲ. ಈ ಹಿಂದಿನಿಂದಲೂ ಈ ರೀತಿಯ ಕಾರ್ಯಾಚರಣೆ ನಡೆದುಕೊಂಡು ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ