ಸಾಲ ಮನ್ನಾಗೆ ಒತ್ತಾಯಿಸಿ ದೆಹಲಿಯಲ್ಲಿ ರೈತರಿಂದ ಪ್ರತಿಭಟನೆ

ಶುಕ್ರವಾರ, 24 ಮಾರ್ಚ್ 2017 (16:31 IST)
ಸಾಲ ಮನ್ನಾ ಮಾಡುವಂತೆ ರೈತರು ಅರೆಬೆತ್ತಲೆಯಾಗಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ತೀವ್ರ ಪ್ರತಿಭಟನೆ ಆರಂಭಿಸಿದ್ದಾರೆ.
 
ಚಿತ್ರನಟರಾದ ಪ್ರಕಾಶ್ ರೈ ಮತ್ತು ವಿಶಾಲ್ ಕೂಡಾ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದು, ರೈತರ ಆತ್ಮಹತ್ಯೆ ತಡೆಯುವುದು ಕೇಂದ್ರ ಸರಕಾರದ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
 
ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಭೀಕರ ಬರಗಾಲ ಎದುರಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರನ್ನು ಸಂಕಷ್ಟದಿಂದ ಹೊರತರಲು ಸಾಲ ಮನ್ನಾ ಮಾಡುವುದು ಉತ್ತಮ ಮಾರ್ಗವಾಗಿದೆ ಎಂದು ಖ್ಯಾತ ನಟ ಪ್ರಕಾಶ್ ರೈ ಅಭಿಪ್ರಾಯಪಟ್ಟಿದ್ದಾರೆ.
 
ದೇಶಾದ್ಯಂತ ಬರಗಾಲದ ಬವಣೆಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ಎದುರಾಗಿದೆ. ಇಂತಹ ಸ್ಥಿತಿಯಲ್ಲಿ ಸರಕಾರಗಳು ರೈತರು ನೆರವಿಗೆ ಬರಬೇಕಾಗಿದೆ ಎಂದು ತಮಿಳುನಟ ವಿಶಾಲ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ