18 ಶಾಸಕರ ಅನರ್ಹ ಆದೇಶಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ

ಬುಧವಾರ, 20 ಸೆಪ್ಟಂಬರ್ 2017 (14:10 IST)
ತಮಿಳುನಾಡಿನಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. 18 ಅನರ್ಹ ಶಾಸಕರ ಅನರ್ಹ ಆದೇಶಕ್ಕೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಇಂದು ನಿರಾಕರಿಸಿದೆ.
ಅನರ್ಹರಾಗಿರುವ 18 ಶಾಸಕರ ವಿಧಾನಸಭೆ ಕ್ಷೇತ್ರಗಳಲ್ಲಿ ಮರುಚುನಾವಣೆ ಸದ್ಯಕ್ಕಿಲ್ಲ.ಮುಂದಿನ ವಿಚಾರಣೆಯ ನಂತರ ಚುನಾವಣೆ ನಡೆಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಕೋರ್ಟ್ ನಿರ್ಧರಿಸುತ್ತದೆ ಎಂದು ಮೂಲಗಳು ತಿಳಿಸಿವೆ.
 
ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಬಹುಮತ ಸಾಬೀತಿಗೆ ನೀಡಿದ್ದ ತಡೆ ಆದೇಶವನ್ನು ಕೂಡಾ ಮುಂದುವರಿಸಿದ ಹೈಕೋರ್ಟ್, ಆಕ್ಟೋಬರ್ 4 ರವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ.
 
ಸಭಾಪತಿ ಧನಪಾಲ್ ಎಐಎಡಿಎಂಕೆ ಪಕ್ಷ 18 ಬಂಡಾಯ ಶಾಸಕರನ್ನು ಅನರ್ಹಗೊಳಿಸಿದ್ದರು. ಅನರ್ಹತೆಯನ್ನು ಪ್ರಶ್ನಿಸಿ ಎಐಎಡಿಎಂಕೆ ಬಂಡಾಯ ಶಾಸಕರು ಹೈಕೋರ್ಟ್ ಮೊರೆಹೋಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ