ಮತ್ತೆ ಗಡಿ ಖ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ

ಸೋಮವಾರ, 18 ಜನವರಿ 2021 (10:37 IST)
ಬೆಳಗಾವಿ : ಮತ್ತೆ ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮರಾಠಿ ಮಾತನಾಡುವ ಪ್ರದೇಶಗಳು ನಮಗೆ ಸೇರಿದ್ದು. ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ತೇವೆ ಎಂದು ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದರು.  ಈ ಟ್ವೀಟ್ ಖಂಡಿಸಿ ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.  ನಗರದ ಚೆನ್ನಮ್ಮ ವೃತ್ತದಲ್ಲಿ ಉದ್ಧವ್ ಠಾಕ್ರೆ ವಿರುದ್ಧ ಘೋಷಣೆ , ಅವರ ಫೋಟೊಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಕರ್ನಾಟಕದಲ್ಲೇ ಉಳಿಯಬೇಕೆಂಬ ತೀರ್ಪು ನೀಡಿತು. 4 ಜನರ ಆಯೋಗ ನೀಡಿದ ತೀರ್ಪನ್ನು ಮಹಾರಾಷ್ಟ್ರ ಒಪ್ಪಲಿಲ್ಲ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ