ಲಕ್ನೋ : ತನ್ನ ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ ಬಳಸಿ ತಾಯಿಯನ್ನು ಕೊಂದಿದ್ದ ಅಪ್ರಾಪ್ತ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ.
ಆರೋಪಿಯು ಅಪ್ರಾಪ್ತನಾಗಿದ್ದು, ಈ ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಆರೋಪಿಗೆ ಜಾಮೀನು ನೀಡಿದೆ. ಈಗ ಇರುವ ಯಾವ ಸಾಕ್ಷಿಗಳೂ ಸೂಕ್ತವಾಗಿಲ್ಲ.
ಪ್ರಕರಣದಲ್ಲಿ ಆರೋಪಿಯ ಅಜ್ಜಿ ದೂರು ದಾಖಲಿಸಿದ್ದು, ಅವರು ಪ್ರತ್ಯಕ್ಷ ಸಾಕ್ಷಿಯಲ್ಲ. ಇನ್ನುಳಿದ ಸಾಕ್ಷಿಗಳು ಪ್ರತ್ಯಕ್ಷ ಸಾಕ್ಷಿಗಳಾಗಿಲ್ಲ. ಕೇವಲ ಆರೋಪಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅಲ್ಲದೆ ಆರೋಪಿಗೆ ಘಟನೆ ನಡೆದಾಗ 16 ವರ್ಷ. ಇದು ಬಾಲ ನ್ಯಾಯ ಮಂಡಳಿಯ ದೋಷಾರೋಪ ಪಟ್ಟಿಯಲ್ಲಿಯೂ ಸ್ಪಷ್ಟವಾಗಿದೆ. ಇದರಿಂದಾಗಿ ಆತನನ್ನು ಅಪ್ರಾಪ್ತ ಎಂದು ಪರಿಗಣಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ.