ಉಚಿತವಾಗಿ ಮನೆ ಬಾಗಿಲಿಗೆ ಬರಲಿದೆ ರಾಷ್ಟ್ರಧ್ವಜ

ಬುಧವಾರ, 10 ಆಗಸ್ಟ್ 2022 (15:29 IST)
ನವದೆಹಲಿ : ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ, ಭಾರತೀಯ ಅಂಚೆ ಸೇವೆಯು ರಾಷ್ಟ್ರಧ್ವಜವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುತ್ತಿದೆ.
 
ತ್ರಿವರ್ಣ ಧ್ವಜವನ್ನು 25 ರೂ. ದರದಲ್ಲಿ ಇಂಡಿಯಾ ಪೋಸ್ಟ್ನ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಖರೀದಿಸಬಹುದು. ಇದರಲ್ಲಿ ಯಾವುದೇ ಜಿಎಸ್ಟಿ ಅನ್ವಯಿಸುವುದಿಲ್ಲ.

ಧ್ವಜವನ್ನು ಖರೀದಿಸಲು ಆಸಕ್ತಿಯುಳ್ಳವರು ePostoffice ಪೋರ್ಟಲ್ನಿಂದ ಆರ್ಡರ್ ಮಾಡಬಹುದು. ಪರ್ಯಾಯವಾಗಿ, ರಾಷ್ಟ್ರಧ್ವಜವನ್ನು ಖರೀದಿಸಲು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. 

ಇಂಡಿಯಾ ಪೋಸ್ಟ್ ಈ ಕುರಿತು ಟ್ವಿಟ್ಟರ್ನಲ್ಲಿ, ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತಿರಂಗಾ ಮಾರಾಟ ಮತ್ತು ವಿತರಣೆಯನ್ನು ಸುಲಭಗೊಳಿಸಲಾಗುವುದು. 2022ರ ಸ್ವಾತಂತ್ರ್ಯ ದಿನಾಚರಣೆಯ ಮೊದಲ ರಜಾದಿನಗಳಲ್ಲಿ ಎಲ್ಲ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತವೆ ಎಂದು ಬರೆದು ಪೋಸ್ಟ್ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ