ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ; ಈಶಾನ್ಯ ಭಾರತದಲ್ಲಿ ತೀವ್ರ ಪ್ರತಿಭಟನೆ
ಗುರುವಾರ, 12 ಡಿಸೆಂಬರ್ 2019 (11:07 IST)
ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆಗೆ ಉಭಯ ಸದನಗಳಲ್ಲಿ ಅಂಗೀಕಾರ ದೊರೆತ ಹಿನ್ನಲೆಯಲ್ಲಿ ಈಶಾನ್ಯ ಭಾರತದಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿದೆ.
ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ಅಸ್ಸಾಂ ನ ರಾಜಧಾನಿ ಗುವಾಹತಿ, ದಿಬ್ರುಗಡ, ಜೊಹ್ರತ್ ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಅಸ್ಸಾಂನಲ್ಲಿ ಕರ್ಪ್ಯೂ ಜಾರಿಯಾಗಿದ್ದು ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ ಅಸ್ಸಾಂನಲ್ಲಿ ಇಂಟರ್ ನೆಟ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಅಸ್ಸಾಂನ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.