ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ
ಬುಧವಾರ, 25 ಸೆಪ್ಟಂಬರ್ 2019 (09:43 IST)
ನವದೆಹಲಿ : ಇಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಲಿದ್ದು, ಉಪಚುನಾವಣೆಯಲ್ಲಿ ಸ್ಪರ್ಧಿಸುವ ಭಾಗ್ಯ ಸುಪ್ರೀಂ ಕೋರ್ಟ್ ಇಂದು ಅನರ್ಹರಿಗೆ ಕರುಣಿಸುತ್ತಾ ಎಂಬುದು ತಿಳಿದುಬರಲಿದೆ.
ಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿ ಸರ್ಕಾರ ಉರುಳಲು ಕಾರಣರಾಗಿದ್ದ 17 ಮಂದಿ ಶಾಸಕರನ್ನು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹರೆಂದು ಘೋಷಣೆ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲ್ಲೇರಿದ್ದಾರೆ.
ಇಂದು ನ್ಯಾ. ಎನ್.ವಿ ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ ಕೃಷ್ಣ ಮುರಾರಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಇಂದು ಅನರ್ಹ ಶಾಸಕರ ಪರ ಘಟಾನುಘಟಿ ವಕೀಲರಾದ ಮುಕುಲ್ ರೊಹ್ಟಗಿ, ಹರೀಶ್ ಸಾಳ್ವೆ, ಗಿರಿ ಸೇರಿದಂತೆ ಮೂರ್ನಾಲ್ಕು ಮಂದಿ ವಕೀಲರು ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ.