ನವದೆಹಲಿ : ಅಂಫಾನ್ ಚಂಡಮಾರುತಕ್ಕೆ ಸಿಲುಕಿ ನಲುಗಿ ಹೋದ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಮುಂಗಡ ಮಧ್ಯಂತರ ನೆರವು ಘೋಷಣೆ ಮಾಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಅಂಫಾನ್ ಚಂಡಮಾರುತ ಬಂಗಾಳಕೊಲ್ಲಿಗೆ ಅಪ್ಪಳಿಸಿದ್ದು, ಇದರ ಹೊಡೆತಕ್ಕೆ ಪಶ್ವಿಮ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ 72 ಮಂದಿ ಸಾವನಪ್ಪಿದ್ದಾರೆ. ಜನ ಜೀವನ ಅಸ್ತವ್ಯಸ್ತವಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ಅಂಫಾನ್ ಹೊಡೆತಕ್ಕೆ ಸಿಲುಕಿದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದು, ಇವರಿಗೆ ಸಿಎಂ ಮಮತಾ ಬ್ಯಾನರ್ಜಿ, ರಾಜ್ಯಪಾಲ ಜಗದೀಪ್ ಧನ‍್ ಖರ್ ಸಾಥ್ ನೀಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳಕ್ಕೆ 1 ಸಾವಿರ ಕೋಟಿ ರೂ. ಮುಂಗಡ ಮಧ್ಯಂತರ ನೆರವು ಘೋಷಣೆ ಮಾಡಿದ್ದಾರೆ.