ಬಾಲಕಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ ಪ್ರಾಂಶುಪಾಲ: ಮುಂದೇನಾಯಿತು ಗೊತ್ತಾ

Sampriya

ಭಾನುವಾರ, 12 ಜನವರಿ 2025 (10:55 IST)
Photo Courtesy X
ಜಾರ್ಖಂಡ್‌:  ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಘಟನೆ ನಡೆದಿದೆ.

ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು 10ನೇ ತರಗತಿಯ 80 ಬಾಲಕಿಯರ ಶರ್ಟ್‌ಗಳನ್ನು ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆಡಳಿತ ಮಂಡಳಿ ತನಿಖೆಗೆ ಮುಂದಾಗಿದೆ. ಕೇವಲ ಬ್ಲೇಜರ್‌ಗಳಲ್ಲಿ ಮನೆಗೆ ಮರಳುವಂತೆ ಮಾಡಿದ ಪ್ರಾಂಶುಪಾಲರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜೋರಾಪೋಖರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ವಾಡಿಹ್‌ನಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಪರಸ್ಪರರ ಅಂಗಿಯಲ್ಲಿ ಸಂದೇಶ ಬರೆದು ಪೆನ್ ಡೇ ಆಚರಿಸುತ್ತಿದ್ದರು ಎಂದು ಪೋಷಕರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ವಿರೋಧಿಸಿ ಪ್ರಾಂಶುಪಾಲರು ಸಿಡಿಮಿಡಿಗೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕ್ಷಮೆಯಾಚಿಸಿದರೂ ಕೂಡ ಅವರ ಅಂಗಿಗಳನ್ನು ತೆಗೆಯುವಂತೆ ಹೇಳಿದ್ದಾರೆ ಎನ್ನಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಶರ್ಟ್ ಇಲ್ಲದೆ ಬ್ಲೇಜರ್‌ನಲ್ಲಿ ಮನೆಗೆ ಕಳುಹಿಸಲಾಗಿದೆ ಎಂದು ಪೋಷಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ನಡವಳಿಕೆಗೆ ಪ್ರಾಂಶುಪಾಲರ ವಿರುದ್ಧ ಹಲವಾರು ಪೋಷಕರು ಆಕ್ರೋಶ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ. ಈ ವೇಳೆ ನಾವು ಕೆಲವು ಸಂತ್ರಸ್ತ ಬಾಲಕಿಯರೊಂದಿಗೂ ಮಾತನಾಡಿದ್ದೇವೆ. ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನ ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ