ಯುವತಿಯ ಮೇಲೆ ಅತ್ಯಾಚಾರ ಎಸಗಿ ಚಿನ್ನ, ಹಣವನ್ನು ದೋಚಿದ ದುಷ್ಕರ್ಮಿಗಳು

ಶುಕ್ರವಾರ, 7 ಸೆಪ್ಟಂಬರ್ 2018 (15:15 IST)
ಘಾಜಿಯಾಬಾದ್ : ದುಷ್ಕರ್ಮಿಗಳು ರಾತ್ರಿಯ ವೇಳೆ ಮನೆಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ ಮನೆಯಲ್ಲಿರುವ ಚಿನ್ನ, ಹಣವನ್ನು ದೋಚಿಕೊಂಡು ಹೋದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಉತ್ತರ ಪ್ರದೇಶದ ಘಾಜಿಯಾಯಾಬಾದ್ ಕಾಕ್ರಾ ಎಂಬ ಗ್ರಾಮದಲ್ಲಿ ಬುಧವಾರ ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಕುಟುಂಬಸ್ಥರನ್ನು ಒತ್ತೆಯಾಳುಗಳಾಗಿರಿಸಿಕೊಂಡಿದ್ದಾರೆ. ಬಳಿಕ ಮನೆಯಲ್ಲಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.


 ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ದೋಚಿದ ನೀಚರು ಪೊಲೀಸ್ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ