ಡ್ರಗ್ ನೀಡಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಶನಿವಾರ, 6 ಅಕ್ಟೋಬರ್ 2018 (08:07 IST)
ಮೊರಾದಾಬಾದ್ : ಕಾಮುಕನೊಬ್ಬ ಅಪ್ರಾಪ್ತೆ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಗೆ ಬಲವಂತವಾಗಿ ಡ್ರಗ್ ನೀಡಿ ಅತ್ಯಾಚಾರ ಎಸಗಿ ಪರಾರಿಯಾಗಿರುವ  ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.


ಇತ್ತ ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದ ಆಕೆಯ  ಪೋಷಕರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಬಾಲಕಿ ಸಿಕ್ಕಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ವಿಚಾರ ತಿಳಿದುಬಂದಿದೆ.


ಈ ಬಗ್ಗೆ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಅತ್ಯಾಚಾರ ಎಸಗಿದ ಆರೋಪಿ ಸಂತ್ರಸ್ತೆ ಬಾಲಕಿಯ ಗ್ರಾಮದವನೇ ಆಗಿದ್ದು, ಎರಡು ಗಂಟೆಗಳ ಕಾಲ ಸತತ ಅತ್ಯಾಚಾರ ಎಸಗಿದ ಎಂದು ಸಂತ್ರಸ್ತೆ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ