ಮುಂಬೈ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಮಲತಂದೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
45 ವರ್ಷದ ಆರೋಪಿ ನವಿ ಮುಂಬೈ ಸಮೀಪದ ಪನ್ವೇಲ್ ತಾಲೂಕಿನಲ್ಲಿ ವಾಸವಾಗಿದ್ದಾನೆ. 14 ವರ್ಷದ ಬಾಲಕಿಯು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ತಾಯಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಬಾಲಕಿಯು 2 ತಿಂಗಳ ಗರ್ಭಿಣಿ ಆಗಿರುವ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಬಾಲಕಿಯ ಬಳಿ ತಾಯಿ ವಿಚಾರಿಸಿದ್ದಾಳೆ. ಈ ವೇಳೆ ಕಳೆದ ವರ್ಷ ನವೆಂಬರ್ ತಿಂಗಳಿಂದ ಆಕೆಯ ಮಲ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಬಗ್ಗೆ ತಾಯಿಗೆ ತಿಳಿಸಿದ್ದಾಳೆ.
ಬಾಲಕಿಯ ತಾಯಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ದಾಖಲಿಸಿಲ್ಲ. ಆದರೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.