ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಒಪ್ಪಿಗೆ
ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಹಾಗೂ ಜೆ.ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಬಿಲ್ಕಿಸ್ ಬಾನೋ ಅವರ ವಕೀಲೆ ಶೋಭಾ ಗುಪ್ತ ಅವರಿಗೆ ಪೀಠವೊಂದನ್ನು ರಚಿಸುವ ಭರವಸೆ ನೀಡಿದೆ.
2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದರು. ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದವರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರ ವಿರುದ್ಧ ಆರೋಪ ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು.