ಈ ವಿಚಾರಕ್ಕಾಗಿ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ ಸುಪ್ರೀಂ ಕೋರ್ಟ್

ಗುರುವಾರ, 20 ಫೆಬ್ರವರಿ 2020 (06:53 IST)
ನವದೆಹಲಿ : ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದ ಯೋಜನೆಯ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದೆ.


ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಸರ್ಕಾರದ ನೀತಿ ಅನುಷ್ಠಾನಗೊಳಿಸುವ ಅರ್ಜಿಯ ವಿಚಾರಣೆ  ನಿನ್ನೆ ಸುಪ್ರೀಂ ಕೊರ್ಟ್ ನ ಮುಖ್ಯ ನ್ಯಾ.ಬೊಬ್ಡೆ, ನ್ಯಾ.ಬಿಆರ್ ಗವಿ ಮತ್ತು ನ್ಯಾ.ಸೂರ್ಯಕಾಂತ್ ಅವರ ತ್ರಿಸದಸ್ಯ ಪೀಠದಲ್ಲಿ ನಡೆಯಿತು.


ಈ ವೇಳೆ ಎಲೆಕ್ಟ್ರಿಕ್ ವಾಹನಗಳ ತಂತ್ರಜ್ಞಾನದ ಯೋಜನೆಯ ಬಗ್ಗೆ ಅಧಿಕಾರಿಗಳಿಗಿಂತ ಸಚಿವರಿಗೆ ಸ್ಪಷ್ಟ ಚಿತ್ರಣ ಇರುವುದರಿಂದ ಸಾರಿಗೆ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗೇ ಅರ್ಜಿಯ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ