ಎಸ್ ಸಿ/ಎಸ್ಟಿ ನೌಕರರಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್

ಬುಧವಾರ, 26 ಸೆಪ್ಟಂಬರ್ 2018 (14:08 IST)
ನವದೆಹಲಿ : ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವುದರ ಕುರಿತು ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದೆ.


ಸುಪ್ರೀಂಕೋರ್ಟ್ ನ ಐವರು ಸದಸ್ಯರ ಸಂವಿಧಾನಿಕ ಪೀಠ, ಇಂದು ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಎಸ್ ಸಿ/ಎಸ್ಟಿ ನೌಕರರಿಗೆ ಬಿಗ್ ಶಾಕ್ ನೀಡಿದೆ.


2006 ರ ಎಂ.ನಾಗರಾಜು ಅವರ ತೀರ್ಪಿನ ಮರು ಪರಿಶೀಲನೆ ಅಗತ್ಯವಿಲ್ಲ. ಎಸ್ ಸಿ/ಎಸ್ಟಿ ನೌಕರರಿಗೆ ಬಡ್ತಿ ನೀಡುವಾಗ ಮೀಸಲಾತಿ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹಾಗೇ ಈ ಪ್ರಕರಣದ ವಿಚಾರಣೆಯನ್ನು ಸಪ್ತ ಪೀಠಕ್ಕೆ ವರ್ಗಾವಣೆ ಮಾಡಲು ಸಂವಿಧಾನಿಕ ಪೀಠ ನಿರಾಕರಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ