ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್

ಭಾನುವಾರ, 4 ಸೆಪ್ಟಂಬರ್ 2022 (09:49 IST)
ನವದೆಹಲಿ : 1990ರಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರು ಮತ್ತು ಸಿಖ್ಖರ ಉದ್ದೇಶಿತ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಬಗ್ಗೆ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ಕೋರ್ಟ್ ಸಲಹೆ ನೀಡಿದೆ. ವಿ ದಿ ಸಿಟಿಜನ್ಸ್ ಎನ್ನುವ ಎನ್ಜಿಓ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಿಟಿ ರವಿಕುಮಾರ್ ಅವರ ಪೀಠವು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಈ ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಲು ಸಾಧ್ಯವಿಲ್ಲ, ಹೀಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲು ಮತ್ತು ಸರ್ಕಾರದ ಮುಂದೆ ತನ್ನ ಕುಂದುಕೊರತೆಗಳನ್ನು ತಿಳಿಸಲು ಪೀಠ ಸೂಚಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಬರುಣ್ ಕುಮಾರ್ ಸಿನ್ಹಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳ ದುಸ್ಥಿತಿಯನ್ನು ಎತ್ತಿ ತೋರಿಸಲು ಪ್ರಯತ್ನಿಸಿದರು.

1989-2003ರ ನಡುವೆ ಹಿಂದಿನ ರಾಜ್ಯದಲ್ಲಿ ಹಿಂದೂ ಮತ್ತು ಸಿಖ್ ಸಮುದಾಯಗಳ ನರಮೇಧಕ್ಕೆ ನೆರವು ನೀಡಿದವರನ್ನು ಗುರುತಿಸಲು ಎಸ್ಐಟಿ ರಚಿಸಬೇಕು, ಆ ಸಮಯದಲ್ಲಿ ಪೊಲೀಸ್ ಮತ್ತು ಇತರ ರಾಜ್ಯ ಯಂತ್ರಗಳು ಆಡಳಿತಾರೂಢ ರಾಜಕೀಯ ಪಕ್ಷಗಳ ನಾಯಕತ್ವದಿಂದ ಪ್ರಭಾವಿತವಾಗಿವೆ ಎಂದು ಎನ್ಜಿಒ ಆರೋಪಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ