ನವದೆಹಲಿ : ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ಮುಂದೂಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 5 ಕ್ಕೆ ಅಂತಿಮ ವೇಳೆ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ನ್ಯಾ. ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿ ವಿಚಾರಣೆ ಮುಂದೂಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮಾಡಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅರ್ಜಿದಾರರು ಈ ಹಿಂದೆ ಆರು ಬಾರಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಈಗ ವಿಚಾರಣೆ ವೇಳೆ ಮುಂದೂಡಿಕೆಗೆ ಮನವಿ ಮಾಡುತ್ತಿದ್ದಾರೆ. ಇದು ಸರಿಯಲ್ಲ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.