ವಿದ್ಯಾರ್ಥಿಗಳಿಗೆ ಬರೆಯುವ ಶಿಕ್ಷೆ ವಿಧಿಸಿದ್ದ ಟೀಚರ್ ಸಸ್ಪೆಂಡ್

ಸೋಮವಾರ, 8 ಮೇ 2023 (12:29 IST)
ಮುಂಬೈ : ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಿಕ್ಷಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆಯ ಖಾಸಗಿ ಶಾಲಾ ಶಿಕ್ಷಕಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಶಿಕ್ಷಕಿ, ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ನೋಟ್ಬುಕ್ನಲ್ಲಿ `ನಾಳೆ ನನ್ನ ಶಾಲಾ ಶುಲ್ಕವನ್ನು ತರಲು ನಾನು ಮರೆಯುವುದಿಲ್ಲ’ ಎಂದು 30 ಬಾರಿ ಬರೆಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಬೇಸತ್ತ ಪೋಷಕರು ಪ್ರತಿಭಟನೆ ನಡೆಸಿದ್ದರು.

ಥಾಣೆ ಮುನ್ಸಿಪಲ್ ಕಾರ್ಪೋರೇಷನ್  ಇದನ್ನು ಗಂಭೀರವಾಗಿ ಪರಿಗಣಿಸಿತ್ತು. ಸಿವಿಕ್ ಕಮಿಷನರ್ ಅಭಿಜಿತ್ ಭಂಗಾರ್ ಅವರು ಶಾಲೆಗೆ ಭೇಟಿ ನೀಡಿ ವಿಚಾರದ ಬಗ್ಗೆ ತನಿಖೆ ನಡೆಸುವಂತೆ ಶಿಕ್ಷಣಾಧಿಕಾರಿಗೆ ಆದೇಶಿಸಿದ್ದರು. ಶಿಕ್ಷಣಾಧಿಕಾರಿ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶ ನೀಡಿದ್ದರು. ಕೂಡಲೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ