ಜಮ್ಮು ಕಾಶ್ಮಿರದ ಅನಂತ್‌ನಾಗ್‌ನಲ್ಲಿ ಉಗ್ರರ ಅಟ್ಟಹಾಸ

ಶನಿವಾರ, 9 ಸೆಪ್ಟಂಬರ್ 2017 (18:55 IST)
ಜಮ್ಮು ಕಾಶ್ಮಿರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಪೊಲೀಸ್ ಬೆಂಗಾವಲು ಪಡೆಯ ವಾಹನಗಳ ಮೇಲೆ ನಡೆಸಿ ಉಗ್ರರ ಅಟ್ಟಹಾಸ ಮೆರೆದ ಘಟನೆ ವರದಿಯಾಗಿದೆ.
ಪೊಲೀಸ್ ಬೆಂಗಾವಲು ಪಡೆಯ ವಾಹನಗಳ ಮೇಲೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿ, ಓರ್ವ ಪೊಲೀಸ್ ಸಿಬ್ಬಂದಿ ಹತನಾಗಿದ್ದು, ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆ ಪ್ರತಿಯಾಗಿ ಪೊಲೀಸ್ ಸಿಬ್ಬಂದಿ ಕೂಡಾ ಪ್ರತಿದಾಳಿ ನಡೆಸಿದಾಗ ಉಗ್ರರು ಪರಾರಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಘಟನೆ ನಡೆದ ಸ್ಥಳವನ್ನು ಸೇನಾಪಡೆಗಳು ಸುತ್ತುವರಿದಿದ್ದು, ಉಗ್ರರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

]ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ