ತ್ರಿವಳಿ ತಲಾಕ್ ವಿಧೇಯಕ ರಾಜ್ಯಸಭೆಯಲ್ಲಿ ಮಂಡನೆ

ಬುಧವಾರ, 3 ಜನವರಿ 2018 (20:35 IST)
ತ್ರಿವಳಿ ತಲಾಕ್ ವಿಧೇಯಕವನ್ನು ತೀವ್ರ ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮಂಡಿಸಿದ್ದಾರೆ.
 
ಮಹಾರಾಷ್ಟ್ರದಲ್ಲಿ ನಡೆದಿರುವ ಹಿಂಸಾಚಾರದ ಬಗ್ಗೆ ರಾಜ್ಯಸಭೆಯಲ್ಲಿ ಗದ್ದಲ ನಡೆಯುವಾದ ರವಿಶಂಕರ್ ಪ್ರಸಾದ್ ತ್ರಿವಳಿ ತಲಾಕ್ ವಿಧೇಯಕವನ್ನು ಮಂಡನೆ ಮಾಡಿದ್ದಾರೆ.
 
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾತನಾಡಿ, ತ್ರಿವಳಿ ತಲಾಕ್ ಮಸೂದೆ ಕುರಿತು ಚರ್ಚೆಯನ್ನು ಹಳಿ ತಪ್ಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಅವರು, ತಿದ್ದುಪಡಿಗೆ ಮನವಿ ಸಲ್ಲಿಸಲು 24 ಗಂಟೆಗಳ ಮುನ್ನ ನೋಟಿಸ್ ನೀಡಬೇಕು ಎಂಬುದು ಕಾಂಗ್ರೆಸ್ ಸದಸ್ಯರಿಗೆ ತಿಳಿದಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
 
ರಾಜ್ಯಸಭೆಯಲ್ಲಿ ಭಾರಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ