ಹೆದ್ದಾರಿಯಲ್ಲಿ ಹೊತ್ತಿ ಉರಿದ ಟ್ರಕ್,ನಾಲ್ವರು ಸಜೀವ ದಹನ..!,
ಮಹಾರಾಷ್ಟ್ರದ ಪುಣೆ ನಗರದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿದ್ದಾರೆ.ವರದಿಗಳ ಪ್ರಕಾರ, ಪುಣೆಯ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದ್ದು, ಟ್ರಕ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ.ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ವಿಷಯ ತಿಳಿಸಲಾಗಿದೆ ಇನ್ನು ತಪ್ಪಿತಸ್ಥರ ವಿರುದ್ಧ FIR ದಾಖಲಿಸಲಾಗಿದೆ ಅಂತಾ ಅದಿಕಾರಿಗಳು ಹೇಳಿದ್ದಾರೆ.