ನವದೆಹಲಿ : ದೇಶದಲ್ಲಿ 31 ಮಂದಿಗೆ ಕೊರೊನಾ ಸೋಂಕು ತಗಲಿರುವ ಹಿನ್ನಲೆಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.
ಇಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೊರೊನಾ ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಆಸ್ಪತ್ರೆಗಳಲ್ಲಿ ವಿಶೇಷ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪ್ರಧಾನಿ ಮೋದಿಗೆ ವರದಿ ನೀಡಲಿದ್ದಾರೆ ಎನ್ನಲಾಗಿದೆ.
ಅಲ್ಲದೇ ಇಂದು ದೇಶದಲ್ಲಿ ಜನೌಷಧಿ ದಿವಸ್ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಜನೌಷಧಿ ಸ್ಟೋರ್ ಮಾಲೀಕರ ಜೊತೆ ಮೋದಿ ಸಂವಾದ ನಡೆಸಲಿದ್ದಾರೆ. ಆ ವೇಳೆಯೂ ಕೊರೊನಾ ವಿಷಯದ ಬಗ್ಗೆಯೂ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.