ಇಂದು ಅಮಿತ್ ಶಾ ಅವರ ಭೇಟಿಗೆ ಮುಂದಾದ ಅನರ್ಹ ಶಾಸಕರು

ಶುಕ್ರವಾರ, 23 ಆಗಸ್ಟ್ 2019 (10:43 IST)
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಬೇಕೆಂದು ಅನರ್ಹ ಶಾಸಕರು ಪಟ್ಟು ಹಿಡಿದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.





ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಅನರ್ಹ ಶಾಸಕರು ಅಮಿತ್ ಶಾ ಅವರನ್ನು ಭೇಟಿ ಮಾಡಲು ಪಟ್ಟು ಹಿಡಿದ ಹಿನ್ನಲೆ  ಇಂದು ಮಧ್ಯಾಹ್ನದೊಳಗೆ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.


ಹಾಗೇ ಈ ವೇಳೆ ಅನರ್ಹ ಶಾಸಕರ ಜೊತೆ ಸಿಎಂ ಯಡಿಯೂರಪ್ಪ ಅವರು ಉಪಸ್ಥಿತರಿದ್ದು, ಅಮಿತ್ ಶಾ ಭೇಟಿ ಮಾಡಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಈ ವೇಳೆ ಕೋರ್ಟ್ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ