ಇಂದು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಪ್ರಕಟ

ಮಂಗಳವಾರ, 2 ಆಗಸ್ಟ್ 2022 (10:41 IST)
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.

ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ವಿಶೇಷ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ ಈ ಆದೇಶವನ್ನು ಕೋರ್ಟ್ ಪ್ರಕಟಿಸಲಿದೆ.

ಪ್ರಕರಣದ ತನಿಖೆ ನಡೆಸಿದ್ದ ಇಡಿ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಸಿತ್ತು. ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ತಮ್ಮ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿಗಣಿಸಲು ಮನವಿ ಮಾಡಿದರು. ಮತ್ತು ಪ್ರಕರಣ ಇತರೆ ಆರೋಪಿಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. 

ಕಳೆದ ಶನಿವಾರ ಈ ಎಲ್ಲ ಅರ್ಜಿಗಳನ್ನು ನ್ಯಾ. ವಿಕಾಸ್ ದುಲ್ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಜಾಮೀನು ನೀಡದಂತೆ ಇಡಿ ಪರ ವಕೀಲರು ಮನವಿ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ