ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪತ್ನಿ!

ಗುರುವಾರ, 6 ಏಪ್ರಿಲ್ 2023 (08:10 IST)
ಚೆನ್ನೈ : ಚೆನ್ನೈನ ಗ್ರೌಂಡ್ ಏರ್ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
 
ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ (39) ಎಂದು ಗುರುತಿಸಲಾಗಿದೆ. ವಿಲ್ಲುಪುರಂ ನಿವಾಸಿ ಜಯನಂದನ್ ಮೃತ ವ್ಯಕ್ತಿ. ಜಯನಂದನ್ ತನ್ನ ಸಹೋದರಿಯೊಂದಿಗೆ ನಂಗನಲ್ಲೂರಿನಲ್ಲಿ ವಾಸವಾಗಿದ್ದ. ಆದರೆ ಮಾ. 18ರಂದು ಆತ ತನ್ನ ಮನೆಗೆ ಹೋಗುವುದಾಗಿ ಸಹೋದರಿಗೆ ಹೇಳಿ ಮನೆಯಿಂದ ಹೋಗಿದ್ದಾನೆ.

ಅದಾದ ಬಳಿಕ ಜಯನಂದನ್ನ ಫೋನ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಸಂಪರ್ಕಿಸಲು ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಯನಂದನ್ ಸಹೋದರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಜಯನಂದನ್ ಸೆಮ್ಮಲಂಪಟ್ಟಿಯಲ್ಲಿರುವ ಭಾಗ್ಯಲಕ್ಷ್ಮಿಗೆ ಕೊನೆಯ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ತನಿಖೆ ನಡೆಸಿದ್ದಾರೆ. ಈ ವೇಳೆ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವುದಾಗಿ ಭಾಗ್ಯಲಕ್ಷ್ಮಿ ಒಪ್ಪಿಕೊಂಡಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ