ಗಂಡ, ಅತ್ತೆಯನ್ನು ಕೊಂದು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟ ಮಹಿಳೆ!
ಕೊಲೆ ಮಾಡಿದ ವಂದನಾ ಕಲಿತಾ ಎಂಬ ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದಳು. ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು ಹತ್ಯೆ ಮಾಡಿ ಮೂರು ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಸೇರಿ, ಇಬ್ಬರ ದೇಹಗಳ ಭಾಗಗಳನ್ನು ಬೇರೆಡೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಗುವಾಹಟಿಯಿಂದ 150 ಕಿಮೀ ದೂರದಲ್ಲಿರುವ ಮೇಘಾಲಯ ರಾಜ್ಯದ ಚಿರಾಪುಂಜಿಗೆ ಕೊಂಡೊಯ್ದಿದ್ದರು. ಅಲ್ಲಿ ದೇಹದ ಭಾಗಗಳನ್ನು ಎಸೆದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.